ಭಾರತ, ಏಪ್ರಿಲ್ 6 -- ಮೈಸೂರು: ಚುನಾವಣೆಯಿಂದ ಚುನಾವಣೆಗೆ ಇಳಿಕೆಯಾಗುತ್ತಿರುವ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ಮುಂದಾಗುತ್ತಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಹೆಚ್ಚಳಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ನಗರ ಪ್ರದೇಶದ ಹಲವು ಮತದಾರರು ಚುನಾವಣೆಯ ದಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸುವ ಬದಲು ದೂರದ ಊರುಗಳಿಗೆ ಪ್ರವಾಸ ಕೈಗೊಳ್ಳುತ್ತಾರೆ. ಪರಿಣಾಮ ಗ್ರಾಮೀಣ ಪ್ರದೇಶಕ್ಕೆ ಹೋಲಿಸಿದರೆ ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತದಾನ ಪ್ರಮಾಣ ಹೆಚ್ಚಿಸಲು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಮೈಸೂರು ಜಿಲ್ಲಾಡಳಿತದ ವತಿಯಿಂದ ಇಂದು (ಏಪ್ರಿಲ್ 6ರಂದು) ವಿಂಟೇಜ್ ಕಾರುಗಳ ರ‍್ಯಾಲಿ (Vintage Cars Rally) ನಡೆಸಿತು.

ಮತದಾರರಲ್ಲಿ ಮತದಾನದ ಮಹತ್ವ ಹಾಗು ಚುನಾವಣೆಯ ಬಗ್ಗೆ ಅರಿವು ಮೂಡಿಸಲು ಸ್ವೀಪ್ ಸಮಿತಿ ವತಿಯಿಂದ ವಿಂಟೇಜ...