ಭಾರತ, ಜನವರಿ 26 -- ಮಂಗಳೂರು: ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ (62) ಇಂದು (ಜನವರಿ 26) ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಇತ್ತೀಚೆಗೆ ಗಂಭೀರವಾಗಿತ್ತು. ರವಿವಾರ ಅಪರಾಹ್ನ ಬಾಳೆಪುಣಿಯ ಸ್ವಗೃಹದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. 26 ವರ್ಷಗಳ ಕಾಲ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಇಷ್ಟೇ ಅಲ್ಲದೆ ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು.

ಅಕ್ಷರಸಂತ ಎಂದೇ ಪ್ರಖ್ಯಾತರಾದ ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ಕನ್ನಡನಾಡಿಗೆ ಪರಿಚಯಿಸಿದ ಹಿರಿಮೆ ಇವರದ್ದು. ಪತ್ರಿಕಾರಂಗದಲ್ಲಿ ಇವರ ಸೇವೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್...