ಭಾರತ, ಮಾರ್ಚ್ 3 -- 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಎರಡು ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಅದರಂತೆ ಮೊದಲ ಸೆಮಿಫೈನಲ್ ಪಂದ್ಯ ಮಾರ್ಚ್ 4ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಹೈವೋಲ್ಟೇಜ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಮಹತ್ವದ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಕಾಣುವ ನಿರೀಕ್ಷೆಯಿದೆ. ಈ ಪಂದ್ಯಕ್ಕೂ ನಾಲ್ವರು ಸ್ಪಿನ್ನರ್​ಗಳನ್ನೇ ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹಾಗಿದ್ದರೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ? ಇಲ್ಲಿದೆ ವಿವರ.

ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡವು ನಾಲ್ವರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿದಿತ್ತು. ಈ ಪೈಕಿ ಇಬ್ಬರು ಸ್ಪಿನ್ ಆಲ್​ರೌಂಡರ್ಸ್​. ಪಂದ್ಯವನ್ನು 44 ರನ್​ಗಳಿಂದ ಗೆದ್ದುಕೊಳ್ಳಲು ಈ ನಾಲ್ವರು ಸಹ ಪ್ರಮುಖ ಪಾತ್ರವಹಿಸಿದ್ದರು. ಅದರಲ್ಲೂ ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಪಂದ್ಯವಾಡಿದ ಮತ್ತು ಹರ್ಷಿತ...