ಭಾರತ, ಏಪ್ರಿಲ್ 16 -- ಹವಾಮಾನ ವರದಿಯ ಪ್ರಕಾರ ಇಂದು ಏಪ್ರಿಲ್ 16ರಂದು ವಾತಾವರಣ ಹೇಗಿರಲಿದೆ ಎಂಬುದನ್ನು ನಾವಿಲ್ಲಿ ನೀಡಿದ್ದೇವೆ. ಇಂದು ಏಪ್ರಿಲ್ 16ರಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಏಪ್ರಿಲ್ 16: ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 23 ಡಿಗ್ರಿ ಸೆಲ್ಸಿಯಸ್ ಮತ್ತು 32 ಡಿಗ್ರಿ ಸೆಲ್ಸಿಯಸ್ ಇರುವ ಮೋಡ ಕವಿದ ವಾತಾವರಣವಿರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಕರಾವಳಿಯಲ್ಲಿ ಮಳೆ ಕಾಣಿಸಿಕೊಳ್ಳಲಿದೆ. ದಕ್ಷಿಣ ಕನ...