ಭಾರತ, ಮಾರ್ಚ್ 21 -- ಸತತ ಸೋಲುಗಳಿಂದ ಕಂಗೆಟ್ಟಿದ್ದ ಪಾಕಿಸ್ತಾನ ತಂಡ ಕೊನೆಗೂ ಜಯದ ಹಳಿಗೆ ಮರಳಿದೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪಾಕ್​ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸುವುದರೊಂದಿಗೆ ಸರಣಿ ಕೈ ತಪ್ಪುವುದನ್ನು ರಕ್ಷಿಸಿಕೊಂಡಿದೆ. ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಸೋಲಿಗೆ ಶರಣಾಗಿದ್ದ ಪ್ರವಾಸಿಗರು, ಮೂರನೇ ಪಂದ್ಯದಲ್ಲಿ ಪುನರಾಗಮನ ಮಾಡುವ ಮೂಲಕ 2-1 ಹಿನ್ನಡೆ ಅನುಭವಿಸಿದೆ. ಆದರೆ ಉಳಿದ 2 ಪಂದ್ಯಗಳಲ್ಲಿ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 19.5 ಓವರ್​​ಗಳಲ್ಲಿ 204 ರನ್​ಗೆ ಆಲೌಟ್ ಆಯಿತು. ಪಾಕಿಸ್ತಾನ 16 ಓವರ್​ಗಳಲ್ಲೇ 1 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತು. ಅದ್ಭುತ ಶತಕ ಸಿಡಿಸಿದ ಹಸನ್ ನವಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 205 ರನ್​​ಗಳ ಗುರಿ ಬೆನ್ನತ್ತಿದ ಪಾಕಿಸ್ತಾನಕ್ಕೆ ಆರಂಭಿಕ ಜೋಡಿ ಮೊಹಮ್ಮದ್ ಹ್ಯಾರಿಸ್ ಮತ್ತು ಹಸನ್ ನವಾಜ್ ಮೊದಲ ವಿಕೆಟ್​ಗೆ 74 ರನ್​ಗಳ ಜತೆಯಾಟ ನೀಡಿದರು. 20 ಎಸೆತಗಳಲ್ಲಿ 4 ಬೌ...