ಭಾರತ, ಮಾರ್ಚ್ 14 -- ಬಹುನಿರೀಕ್ಷಿತ 18ನೇ ಆವೃತ್ತಿಯ ಐಪಿಎಲ್ ಮಾರ್ಚ್​ 22ರಿಂದ ಆರಂಭವಾಗಲಿವೆ. ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಉದ್ಘಾಟನಾ ಪಂದ್ಯ ಜರುಗಲಿದೆ. ಮರುದಿನವೇ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ತಲಾ ಐದು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿರುವ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮಾರ್ಚ್ 23 ರಂದು ಡಬಲ್ ಹೆಡ್ಡರ್​ನ 2ನೇ ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಈ ಪಂದ್ಯಕ್ಕೆ ಚೆನ್ನೈನ ಎಂ ಚಿದಂಬರಂ ಮೈದಾನ ಆತಿಥ್ಯ ವಹಿಸಲಿದೆ.

2025ರ ಐಪಿಎಲ್​ನಲ್ಲಿ ಬ್ಲಾಕ್​ಬಸ್ಟರ್ ಆರಂಭದೊಂದಿಗೆ ಅಭಿಯಾನ ಆರಂಭಿಸುವ ಲೆಕ್ಕಾಚಾರದಲ್ಲಿರುವ ಚೆನ್ನೈ ಮತ್ತು ಮುಂಬೈ ಟೀಮ್ಸ್​ ಕಳೆದ ಆವೃತ್ತಿಯಲ್ಲಿ ಗುಂಪು ಹಂತದಲ್ಲೇ ಹೊರಬಿದ್ದಿದ್ದವು. ಅದರಲ್ಲೂ ಹೀನಾಯ ಪ್ರದರ್ಶನದೊಂದಿಗೆ ಕೊನೆಯ ಸ್ಥಾನಿಯಾಗಿ ಟೂರ್ನಿ ಮುಗಿಸಿತ್ತು. ಚೆನ್ನೈ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಸ್ವಲ್ಪದರಲ್ಲಿ ಕಳೆದುಕೊಂಡಿತ್ತು. ಉಭಯ ತಂಡಗಳು ಈಗಾಗಲೇ ಭರ್ಜರಿ ಸಿದ...