Bengaluru, ಮಾರ್ಚ್ 24 -- Milk Price Hike Issue: ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ದರ ಏರಿಕೆಯ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ನೀಡಬೇಕೆಂಬ ಒಕ್ಕೂಟಗಳ ಮನವಿಗೆ ಒಪ್ಪಿಗೆ ಸೂಚಿಸಿಲ್ಲ ಎಂದು ತಿಳಿದು ಬಂದಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು (ಮಾರ್ಚ್ 24, ಸೋಮವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ, ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯಿಸ...