Bengaluru, ಮೇ 23 -- ಹಾವೇರಿ: ಹಾನಗಲ್‌ನಲ್ಲಿ ನಡೆದಿದ್ದ ಗ್ಯಾಂಗ್‌ರೇಪ್ ಪ್ರಕರಣದ ಆರೋಪಿಗಳಿಗೆ ಜಾಮೀನು ಲಭಿಸಿದ್ದು, ಹೊರಗಡೆ ಬರುತ್ತಿದ್ದಂತೆ ರೋಡ್‌ ಶೋ ನಡೆಸಿದ ಏಳು ಮಂದಿ ವಿರುದ್ಧ ಪೊಲೀಸರು ಮತ್ತೆ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ಶೋಧ ಮುಂದುವರಿದಿದೆ.

ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇದ್ದಿದ್ದರಿಂದ ಏಳು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿತ್ತು. ಮತ್ತೆ ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ವಿಚಾರಣೆಯ ಅಗತ್ಯವಿದ್ದರೆ ನ್ಯಾಯಾಲಯಕ್ಕೆ ಹಾಜರಾಗುತ್ತೇವೆ ಎಂದು ಆರೋಪಿಗಳು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದರು. ಆದರೆ ಜಾಮೀನು ಪಡೆದು ಹೊರಗಡೆ ಬರುತ್ತಿದ್ದಂತೆ, ಗೆಳೆಯರ ಸಹಾಯದೊಂದಿಗೆ ವಾಹನಗಳಲ್ಲಿ ರೋಡ್ ಶೋ ನಡೆಸಿದ್ದಾರೆ.

ಅತ್ಯಾಚಾರ ಆರೋಪಿಗಳ ಈ ವರ್ತನೆ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದರು. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪಿ...