ಭಾರತ, ಮೇ 8 -- ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.ಕುಟುಂಬದ ಸಮೇತರಾಗಿ ಎಂಟು ಮಂದಿ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಕಾರು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನೂ ಇಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವೇಗದಲ್ಲಿ ಲಾರಿಗೆ ಡಿಕ್ಕಿ ಹೊಡದಾಗ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಡಗಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ನೆರವಾದರು.

ಮೃತರನ್ನು ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಎಂದು ಗುರುತಿಸಲಾಗಿದೆ. ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿ...