ಭಾರತ, ಮಾರ್ಚ್ 15 -- Dr Panchakshari Hiremath Death: ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕ ಹಾಗೂ ಇಲ್ಲಿಯ ಜಯನಗರ ನಿವಾಸಿ ಡಾ ಪಂಚಾಕ್ಷರಯ್ಯ ಹಿರೇಮಠ (92) ಶುಕ್ರವಾರ ನಿಧನರಾದರು. ಕನ್ನಡ ಸಾಹಿತ್ಯ ರಂಗದಲ್ಲಿ ಕವಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ, ಸಂಪಾದಕ ಮತ್ತು ವಾಗ್ಮಿಯಾಗಿ ಗುರುತಿಸಿಕೊಂಡಿದ್ದ ಪಂಚಾಕ್ಷರಯ್ಯ ಹಿರೇಮಠ ಅವರು ಸ್ವಾತಂತ್ರ್ಯ ಹೋರಾಟಗಾರರೂ ಆಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಮಾ.15 ಶನಿವಾರ ಸಂಜೆ 4ಗಂಟೆಗೆ ಕೊಪ್ಪಳ ಜಿಲ್ಲೆ ಬಿಸರಳ್ಳಿ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮೂಲತಃ ಕೊಪ್ಪಳ ಜಿಲ್ಲೆ ಬಿಸರಹಳ್ಳಿಯಲ್ಲಿ 1933ರ ಜನವರಿ 6 ರಂದು ಪಂಚಾಕ್ಷರಿ ಹಿರೇಮಠ ಅವರು ಜನಿಸಿದರು. ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟ, ಚಳವಳಿಯ ಪ್ರಭಾವಕ್ಕೆ ಒಳಗಾಗಿ ತಮ್ಮ ಶಿಕ್ಷಣವನ್ನು ಅರ್ಧಕ್ಕೇ ನಿಲ್ಲಿಸಿ ಸ್ವಾತಂತ್ರ್ಯ ಸಮರಾಂಗಣಕ್ಕೆ ಧುಮುಕಿದರು. ಹೀಗ...
Click here to read full article from source
To read the full article or to get the complete feed from this publication, please
Contact Us.