Bengaluru, ಏಪ್ರಿಲ್ 6 -- Bande Saheb Teaser: ಕೆಲ ವರ್ಷಗಳ ಹಿಂದೆ ಕಲಬುರಗಿಯಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಶೂಟೌಟ್‌ಗೆ ಬಲಿಯಾದ ದಕ್ಷ ಪೊಲೀಸ್ ಅಧಿಕಾರಿ (ಪಿಎಸ್ಐ) ಹುತಾತ್ಮ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಚಿತ್ರ ʻಬಂಡೆ ಸಾಹೇಬ್ʼ. ಇತ್ತೀಚೆಗೆ ಈ ಚಿತ್ರದ ಟೀಸರ್ ಅನಾವರಣ ಸಮಾರಂಭ ನಡೆಯಿತು. ನಟ ಶರಣ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಅಪ್ಪು ಅವರಿಗಾಗಿ ಚಿತ್ರತಂಡ ಹಾಡೊಂದನ್ನು ಅರ್ಪಿಸಿದೆ.‌ ಈ ಹಾಡನ್ನು ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ‌ ರಾಜು ಗೌಡ ಬಿಡುಗಡೆ ಮಾಡಿದರು.

ಈ ಕಥೆಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಮೊದಲು ತಂಡಕ್ಕೆ ಅಭಿನಂದನೆ ಸಲ್ಲಿಸಬೇಕು. ಟೀಸರ್‌ನಲ್ಲೇ ಇನ್ನೂ ಏನೋ ಇದೆ ಅನ್ನುವಷ್ಟರಲ್ಲೇ ಟೀಸರ್ ಮುಗಿದು ಹೋಗಿರುತ್ತದೆ. ಈ ವಿಷಯಕ್ಕೆ ನಿಜಕ್ಕೂ ನಿರ್ದೇಶಕರನ್ನು ಶ್ಲಾಘಿಸಬೇಕು. ಸಂತೋಷ್ ರಾಮ್ ಅವರ ನಟನೆ ಕೂಡ ಚೆನ್ನಾಗಿದೆ. ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಈ ಸಿನಿಮಾವನ್ನು ನಾನು ಕೂಡ ತೆರೆಯ ಮೇಲೆ ನೋಡ...