Bengaluru, ಏಪ್ರಿಲ್ 4 -- ಸೈಫ್‌ ಅಲಿಖಾನ್‌ ಮತ್ತು ಅಮೃತಾ ಸಿಂಗ್‌ ದಂಪತಿಯ ಮಗಳು ಸಾರಾ ಅಲಿಖಾನ್‌, ಇದೀಗ ಅಚ್ಚರಿಯ ರೀತಿಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಐತಿಹಾಸಿಕ ಪ್ರಸಿದ್ಧ ಚಂದ್ರಮೌಳೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಆ ಭೇಟಿಯ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ.

ಚಂದ್ರಮೌಳೇಶ್ವರನ ದರ್ಶನ ಪಡೆದ ಬಳಿಕ, ದೇಗುಲದ ಹೊರವಲಯದಲ್ಲಿ ಕುಳಿತು, ಫೋಟೋ ಕ್ಲಿಕ್ಕಿಸಿಕೊಂಡು, ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ.

ನಟಿಯ ಈ ಫೋಟೋ ವೈರಲ್‌ ಆಗುತ್ತಿದ್ದಂತೆ, ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದ ಶಾಸಕ ಮಹೇಶ್‌ ತೆಂಗಿನಕಾಯಿ ನಟಿಯ ಫೋಟೋ ಶೇರ್‌ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸರಾ ಅಲಿಖಾನ್ ಅವರು ಭೇಟಿ ನೀಡಿದ ವಿಷಯ ತಿಳಿದು ಸಂತೋಷವಾಗಿದೆ ಎಂದಿದ್ದಾರೆ....