ಭಾರತ, ಏಪ್ರಿಲ್ 13 -- ಹುಬ್ಬಳ್ಳಿ: ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. 5 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಿ ಕೊಂದಿದ್ದಾನೆ ಎಂದು ಸ್ಥಳೀಯ ನಿವಾಸಿಗಳು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಯಾವುದೇ ಅಧಿಕೃತ ಮಾಹಿತಿಯೂ ಲಭ್ಯವಾಗದೇ ಈ ಬಗ್ಗೆ ಸತ್ಯಾಸತ್ಯತೆಯನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲದ ಕಾರಣ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದರು. ಅದೇ ರೀತಿ ಸಿಸಿಟಿವಿ ದೃಶ್ಯಗಳನ್ನು ಸಹ ಪರಿಶೀಲಿಸಿದ್ದರು.

ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಜನರ ಒತ್ತಡವೂ ಅಷ್ಟೇ ಇತ್ತು. ಈ ಸಂದರ್ಭದಲ್ಲಿ ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ...