ಭಾರತ, ಏಪ್ರಿಲ್ 14 -- ಹುಬ್ಬಳ್ಳಿ: 5 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆ ನಡೆದ 6 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಇದೀಗ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

ಕೊಪ್ಪಳ ಮೂಲಕ ದಿನಗೂಲಿ ಕಾರ್ಮಿಕರಾದ ಬಾಲಕಿಯ ತಂದೆ-ತಾಯಿ ಕೆಲಸಕ್ಕೆಂದು ಹೋದಾಗ ಮಗು ಮನೆಯ ಬಳಿ ಆಟವಾಡುತ್ತಿತ್ತು. ಆಗ ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ ಕರೆದೊಯ್ದ ಬಿಹಾರ ಮೂಲದ ಆರೋಪಿ ಆಕೆಯ ಮೇಲೆ ಅತ್ಯಚಾರ ಎಸಗಿ ಕೊಲೆ ಮಾಡಿ ಪಾಳು ಬಿದ್ದ ಕಟ್ಟಡದಲ್ಲಿ ಎಸೆದು ಹೋಗಿದ್ದ. ಈ ಘಟನೆ ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ನಡೆದಿದೆ.

ಪ್ರಕರಣ ಸಂಬಂಧಿಸಿ ಶಾಸಕ ಪ್ರಸಾದ ಅಬ್ಬಯ್ಯ ಅವರೊಂದಿಗೆ ಕೆಎಂಸಿ-ಆರ್‌ಐ ಆಸ್ಪತ್ರೆಗೆ ಬಂದಿದ್ದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸರ್ಕಾರದ ವತಿಯಿಂದ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅ...