ಭಾರತ, ಏಪ್ರಿಲ್ 16 -- ಬೆಂಗಳೂರು: ಏಪ್ರಿಲ್ 13ರಂದು ಹುಬ್ಬಳ್ಳಿಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಪೊಲೀಸರಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ ಬಿಹಾರ ಮೂಲದ ವಲಸೆ ಕಾರ್ಮಿಕನ ಮರಣೋತ್ತರ ಪರೀಕ್ಷೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ (ಏ. 15) ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆರೋಪಿ ರಿತೇಶ್ ಕುಮಾರ್ ಐದು ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದಾನೆಂದು ಆತನನ್ನು ಸೆರೆಹಿಡಿಯುವ ಪ್ರಯತ್ನ ನಡೆಯುತ್ತಿತ್ತು. ಆದರೆ ಆತ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಆತನನ್ನು ಕೊಲ್ಲಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕರ್ನಾಟಕ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ಮೃತ ದೇಹದ ಮರಣೋತ್ತರ ಪರೀಕ್ಷೆ ಮಾಡಲು ಆದೇಶಿಸಿದೆ. ಪೊಲೀಸ್ ಕ್ರಮದಿಂದ ಉಂಟಾಗುವ ಸಾವುಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 2014ರ ಮಾರ್ಗಸೂಚಿಗಳನ್ನು ಅನುಸರಿಸುವ ಅಗತ್ಯವನ್ನು ನ...