ಭಾರತ, ಏಪ್ರಿಲ್ 12 -- ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಹಲವು ಅಂಶಗಳ ಚರ್ಚೆಯಾಯಿತು. ಚರ್ಚೆಯಾದ ವಿಷಯಗಳೇನು? ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು ಏನೆಲ್ಲ ಮಾತುಕತೆ ನಡೆದಿದೆ ಎಂಬ ವಿಚಾರ ಇಲ್ಲಿದೆ. ಸಚಿವ ಸಂತೋಷ್ ಲಾಡ್ ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿ ಬಂದಿದ್ದಾರೆ. ಮುಖ್ಯಮಂತ್ರಿಗಳಿಗೆ ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆಗಳನ್ನು, ಅವಕಾಶಗಳನ್ನು ವಿವರಿಸಿದ ಸಚಿವ ಸಂತೋಷ್ ಲಾಡ್ ಈ ಅಂಶಗಳನ್ನು ತಿಳಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ...