ಭಾರತ, ಏಪ್ರಿಲ್ 14 -- ಹುಬ್ಬಳ್ಳಿ : ಅಶೋಕನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಯತ್ನ ಮಾಡಿ ಬಳಿಕ ಕೊಲೆ ಮಾಡಿದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪಿಯನ್ನು ಹುಬ್ಬಳ್ಳಿ ಅಶೋಕನಗರ ಮಹಿಳಾ ಪಿಎಸ್‌ಐ ಅನ್ನಪೂರ್ಣಾ ಎನ್‌ಕೌಂಟರ್ ಮಾಡಿದ್ದಾರೆ. ಈ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ. ಪಿಎಸ್‌ಐ ಅನ್ನಪೂರ್ಣಾ ಅವರನ್ನು ಸಾಕಷ್ಟು ಜನ ಕೊಂಡಾಡುತ್ತಿದ್ದಾರೆ.

ಹುಬ್ಬಳ್ಳಿ, ಧಾರವಾಡದ ಮಹಾನಗರದ ಇತಿಹಾಸದಲ್ಲಿ ನಡೆದ ಮೊದಲ ಎನ್‌ಕೌಂಟರ್ ಕೂಡ ಇದಾಗಿದೆ. ಈ ಹಿಂದೆ ಹಲವು ಬಾರಿ ಗೋಲಿಬಾರ್ ಆಗಿವೆ. ರೌಡಿಗಳ ಕಾಲಿಗೆ ಗುಂಡೇಟು ಬಿದ್ದಿವೆ. ಆದರೆ, ಈ ರೀತಿ ಎನ್‌ಕೌಂಟರ್ ಆಗಿರಲಿಲ್ಲ. ಭಾನುವಾರ ಬಾಲಕಿಯ ಕೊಲೆ ಮಾಡಿದ ಆರೋಪಿ ತಪ್ಪಿಸಿಕೊಳ್ಳುವಾಗ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ, ಈ ವೇಳೆ , ಲೇಡಿ ಪಿಎಸ್‌ಐ ಆರೋಪಿಯನ್ನು ಎನ್‌ಕೌಂಟರ್ ಮಾಡಿದ್ದಾರೆ. ಈವರೆಗೆ ರಾಜ್ಯದಲ್ಲಿ ಯಾವ ಮಹಿಳಾ ಪೊಲೀಸ್ ಅಧಿಕಾರಿ ಮಾಡದ ಸಾಹಸವನ್ನು ಇವರು ಮಾಡಿದ್ದಾರೆ ಎಂದು ಜನರು ...