ಭಾರತ, ಮೇ 25 -- ಪ್ರಪಂಚದಾದ್ಯಂತ ಹಲವರ ಸಾವಿಗೆ ಕಾರಣವಾಗುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಅಗ್ರಸ್ಥಾನವಿದೆ. ಹೃದ್ರೋಗ ಸಂಬಂಧಿತ ಸಮಸ್ಯೆಗಳಿಂದ ಪ್ರತಿ ವರ್ಷ ಅಂದಾಜು 17 ಕೋಟಿಗೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಆ ಕಾರಣಕ್ಕೆ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಿ, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಜೀವನಶೈಲಿಯಲ್ಲಿ ಆರೋಗ್ಯಕರ ಬದಲಾವಣೆ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ. ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ನಮ್ಮ ದೈನಂದಿನ ದಿನಚರಿಯಲ್ಲಿ ಕೆಲವೊಂದು ಅಭ್ಯಾಸವನ್ನು ತಪ್ಪದೇ ರೂಢಿಸಿಕೊಳ್ಳಬೇಕಿದೆ.
ಪ್ರಸಿದ್ಧ ಹೃದ್ರೋಗ ತಜ್ಞರಾದ ಡಾ. ಸಂಜಯ್ ಭೋಜರಾಜ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ವಿಡಿಯೊವೊಂದರಲ್ಲಿ ಹೃದ್ರೋಗದ ಅಪಾಯ ಕಡಿಮೆಯಾಗಲು ಪ್ರತಿದಿನ ಅನುಸರಿಸಬೇಕಾದ 10 ಸಲಹೆಗಳನ್ನು ಹಂಚಿಕೊಂಡಿದ್ದಾರೆ. 'ಹೃದ್ರಯದ ಸಮಸ್ಯೆಗೆ ಸಂಬಂಧಿಸಿದಂತೆ ಹೆಚ್ಚಿನ ಜನರು ಕೊಲೆಸ್ಟ್ರಾಲ್ ಕಡಿಮೆ ಮಾಡಿಕೊಳ್ಳುವುದು ಹಾಗೂ ರೆಡ್ ಮೀಟ...
Click here to read full article from source
To read the full article or to get the complete feed from this publication, please
Contact Us.