ಭಾರತ, ಫೆಬ್ರವರಿ 8 -- ಕಳೆದ ನಾಲ್ಕು ವರ್ಷಗಳಿಂದೀಚೆಗೆ ರಾಜ್ಯದಲ್ಲಿ ಎಲ್ಲೆಡೆ ಹಠಾತ್ ಕುಸಿದು ಬಿದ್ದು ಸಾವು, ಹೃದಯಾಘಾತ, ಮೆದುಳಿನ ಲಕ್ವಾ ಮತ್ತಿತರ ಕಾರಣಗಳಿಂದಾಗಿ ದೊಡ್ಡ ಪ್ರಮಾಣದಲ್ಲಿ ಜನರು ಸಾವಿಗೀಡಾಗುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಉತ್ಪಾದಕ ಪ್ರಾಯ ವರ್ಗದವರಾಗಿದ್ದು, ಪ್ರತಿ ಸಾವು ಹಲವಾರು ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರಕರ್ತ ರಾಜಾರಾಂ ತಲ್ಲೂರು ಅವರು ಜನಪ್ರತಿನಿಧಿಗಳಿಗೆ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಿದ್ದಾರೆ.

ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಇತ್ತೀಚೆಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿರುತ್ತಾರೆ. ಈ ಸಾವುಗಳು ...