ಭಾರತ, ಏಪ್ರಿಲ್ 16 -- ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಡರಾತ್ರಿ ಕ್ಯಾಬ್‌ನಲ್ಲಿ ಬರುವಾಗ ಮಹಿಳೆಯೊಬ್ಬರು ಎದುರಿಸಿದ ಭಯಾನಕ ಅನುಭವವನ್ನು ಹಂಚಿಕೊಂಡಿದ್ದಾರೆ. ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಹೊಸ ಕಳವಳಗಳನ್ನು ಹುಟ್ಟುಹಾಕಿದ್ದಾರೆ. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್‌ನಲ್ಲಿ ವಿವರವಾದ ಪೋಸ್ಟ್ ಹಂಚಿಕೊಂಡಿದ್ದು, ಶ್ರವಿಕಾ ಜೈನ್ ಅವರು ರಾತ್ರಿ 11 ಗಂಟೆ ಸುಮಾರಿಗೆ ಮನೆಗೆ ಪ್ರಯಾಣಿಸುವಾಗ ತಮ್ಮ ಕ್ಯಾಬ್ ಚಾಲಕ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಿದ್ದಾರೆ.

ಜನರು ಹೇಳುತ್ತಾರೆ ಬೆಂಗಳೂರು ಸೇಫ್ ಅಂತ ಆದರೆ, ಇಲ್ಲಿ ಸುರಕ್ಷತೆ ಇಲ್ಲ ಎಂಬ ಮಾತು ಕೇಳಿ ಬಂದಿದೆ. ವಿಮಾನ ನಿಲ್ದಾಣದಿಂದ ರಾತ್ರಿ ಕ್ಯಾಬ್‌ ಮೂಲಕ ಪ್ರಯಾಣ ಮಾಡುತ್ತಿರುವಾಗ ಆದ ಕಹಿ ಘಟನೆಯೊಂದನ್ನು ಶ್ರವಿಕಾ ಜೈನ್ ಹಂಚಿಕೊಂಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಪ್ರಯಾಣ ಪ್ರಾರಂಭವಾದ ಕೂಡಲೇ ಚಾಲಕ ಅವಳನ್ನು ವಿಚಿತ್ರರೀತಿಯಲ್ಲಿ ನೋಡಲಾರಂಭಿಸಿದ್ದನಂತೆ. ಆಕೆಗೆ ಕನ್ನಡ ಗೊತ್ತಿದೆ...