ಭಾರತ, ಏಪ್ರಿಲ್ 4 -- ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ಕುಮಾರಸ್ವಾಮಿ (Ex CM HD Kumaraswamy) ಅವರು ಮಂಡ್ಯ ಲೋಕಸಭಾ (Mandya Lok Sabha Constituency) ಕ್ಷೇತ್ರದಿಂದ ಗುರುವಾರ (ಏಪ್ರಿಲ್ 4) ನಾಮಪತ್ರ ಸಲ್ಲಿಸಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ತಮ್ಮ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ಕುಮಾರಸ್ವಾಮಿಗಿಂತ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರೇ ಹೆಚ್ಚು ಶ್ರೀಮಂತರಾಗಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಒಟ್ಟು ಆಸ್ತಿ ಮೌಲ್ಯ 217.21 ಕೋಟಿ ರೂಪಾಯಿ ಇದೆ. ಆದರೆ, ರಾಮನಗರದ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು 154.39 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದರೆ, ಎಚ್.ಡಿ.ಕುಮಾರಸ್ವಾಮಿ ಅವರು 54.63 ಕೋಟಿ ರೂಪಾಯಿಗಳ ಆಸ್ತಿಯನ್ನು ಮಾತ್ರ ಹೊಂದಿದ್ದಾರೆ.

ಹೆಚ್‌ಡಿಕೆ ವಿರುದ್ಧ ಮೂರು ಪೊಲೀಸ್ ಪ್ರಕರಣಗಳು ಬಾಕಿ ಇವೆ. ಇನ್ನ ಇವರ ಆಸ್ತಿ ಎಲ್ಲೆಲ್ಲಿ...