ಭಾರತ, ಫೆಬ್ರವರಿ 21 -- ಬೆಂಗಳೂರು: ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಸಿಕೊಂಡು ಹೆಚ್‌ಬಿಆರ್‌ ಲೇಔಟ್‌ನಲ್ಲಿ ಕೆಪಿಟಿಎಲ್‌ ಥೀಮ್ ಪಾರ್ಕ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಹೆಚ್‌ಬಿಆರ್‌ ಲೇಔಟ್‌ನ 5 ನೇ ಬ್ಲಾಕ್‌ನ ಕೆಪಿಟಿಸಿಎಲ್‌ ಸ್ಟೇಷನ್ ಬಳಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಇಂಧನ ಸಚಿವ‌ ಕೆ.ಜೆ.ಜಾರ್ಜ್ ಮತ್ತು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಜತೆಯಾಗಿ ಶುಕ್ರವಾರ (ಫೆ 21) ಶಂಕುಸ್ಥಾಪನೆ ನೆರವೇರಿಸಿದರು.

ಹೆಚ್‌ಬಿಆರ್‌ ಲೇಔಟ್ ನ 5 ನೇ ಬ್ಲಾಕ್‌ನ ಕೆಪಿಟಿಸಿಎಲ್‌ ಸ್ಟೇಷನ್ ಪಕ್ಕದಲ್ಲಿ ಅಂದಾಜು 4.65 ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ ಅಭಿವೃದ್ದಿ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ತರಬೇತಿ ಕೇಂದ್ರ ಹಾಗೂ ಗ್ರಾಮೀಣ ಆಟಗಳನ್ನು ಪ್ರೋತ್ಸಾಹಿಸುವ ಕೇಂದ್ರ ಇರಲಿದ್ದು, ಬಯಲು ರಂಗಮಂದಿರ, ವಾಕಿಂಗ್ ಪಾಥ್ ಹಾಗೂ ಓಪನ್ ಜಿಮ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕ, ಶೌಚಾಲಯ ವ್ಯವಸ್ಥೆ ಇರಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಇದೇ ವೇಳೆ, ಹೆಚ್‌ಬಿಆರ್‌ ಲೇಔಟ್ ನ 5 ನೇ ಬ್ಲಾಕ್ ನೂತನವಾಗಿ ನಿರ್ಮಾಣವಾಗುತ...