ಭಾರತ, ಫೆಬ್ರವರಿ 4 -- ಕರ್ನಾಟಕ ಬಿಜೆಪಿ ಬಣಗಳಾಗಿ ವಿಂಗಡಣೆಯಾಗಿದೆ. ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣ ಸಮರ ಸಾರಿದೆ. ಮುಂದಿನ ಅವಧಿಗೆ ಬಿಎಸ್‌ವೈ ಪುತ್ರ ರಾಜ್ಯಾಧ್ಯಕ್ಷರಾಗಿ ಮುಂದುವರೆಯಬಾರದು ಎಂದು ಪಣ ತೊಟ್ಟಿದೆ. ಯತ್ನಾಳ್‌ ಬಣದೊಂದಿಗೆ ಶಾಸಕ ರಮೇಶ್‌ ಜಾರಕಿಹೊಳಿ, ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಸೇರಿದಂತೆ ಹಲವರು ಧ್ವನಿಗೂಡಿಸಿದ್ದಾರೆ. ಈಗಾಗಲೇ ಬಣದ ಸದಸ್ಯರು ರಾಷ್ಟ್ರ ರಾಜಧಾನಿಗೆ ತೆರಳಿ ಹೈಕಮಾಂಡ್‌ ಕದ ತಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ಮುಂದುವರೆಸಬಾರದು ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾಗೆ ಮನವಿ ಸಲ್ಲಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ದೆಹಲಿ ನಾಯಕರಿಂದ ನಮಗೆ ಮೆಚ್ಚುಗೆ ಸಿಕ್ಕಿದೆ. ಎಲ್ಲ ವಿಚಾರಗಳನ್ನು ಹೈಕಮಾಂಡ್​​ ಬಳಿ ಮನವರಿಕೆ ಮಾಡಿಕೊಟ್ಟಿದ್ದೇ...