ಭಾರತ, ಜನವರಿ 29 -- ಬೆಂಗಳೂರು: ಹೈಟೆಕ್‌ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌, ಮನೆ ಹಾಗೂ ಅಪಾರ್ಟ್‌ಮೆಂಟ್‌ಗಳ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿ, ಹೊರ ರಾಜ್ಯ ಹಾಗೂ ವಿದೇಶಗಳ ಯುವತಿಯರನ್ನು ರಕ್ಷಿಸಿದ್ದಾರೆ. ಈ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹೊರ ರಾಜ್ಯ ಹಾಗೂ ವಿದೇಶಗಳಿಂದ ಮಾನವ ಕಳ್ಳ ಸಾಗಣೆ ಮೂಲಕ ಮಹಿಳೆಯರನ್ನು ಕರೆತಂದು ಕೆಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ವಿದೇಶಿ ಮಹಿಳೆ ಹಾಗೂ ಹೊರ ರಾಜ್ಯದ ನಾಲ್ವರು ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ.

ಈ ಯುವತಿಯರನ್ನು ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಬೆಂಗಳೂರಿಗೆ ಕರೆಸಿಕೊಳ್ಳುತ್ತಿದ್ದರು. ನಂತರ ಸಂಪಿಗೆಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಅಕ್ರಮ ಚಟು...