ಭಾರತ, ಏಪ್ರಿಲ್ 8 -- ಬೆಂಗಳೂರು: ವಿಧಾನಸೌಧವು ಬೆಂಗಳೂರು ನಗರದ ಆಕರ್ಷಣೀಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇತ್ತೀಚಿನ ದಿನಗಳಲ್ಲಿ ಬೆಂಗಳೂರಿಗೆ ಬೇಟಿ ನೀಡುವ ದೇಶಿ ಹಾಗೂ ವಿದೇಶಿ ಪ್ರವಾಸಿಗರು ವಿಧಾನಸೌಧಕ್ಕೆ ಬೇಟಿ ನೀಡಲು ಉತ್ಸುಕರಾಗಿದ್ದು, ಪ್ರತಿ ಪ್ರವಾಸಿಗರು ಕಟ್ಟಡದ ಹೊರ ಭಾಗದಲ್ಲಿ ನಿಂತು ವೀಕ್ಷಣೆ ಮಾಡುತ್ತಿದ್ದು, ಛಾಯಾ ಚಿತ್ರ ತೆಗೆದುಕೊಳ್ಳುವ ದೃಶ್ಯಗಳು ಸರ್ವೇ ಸಾಮಾನ್ಯವಾಗಿ ಕಾಣಬಹುದಾಗಿದೆ. ಇದೀಗ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ, ಕಟ್ಟಡದ ಸೌಂದರ್ಯ ಮತ್ತಷ್ಟು ಇಮ್ಮಡಿಸಿದೆ. ಈ ದೀಪಾಲಂಕಾರವನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ.

ಈ ನಿಟ್ಟಿನಲ್ಲಿ ವಿಧಾನಸೌಧಕ್ಕೆ ಬೇಟಿ ನೀಡುವ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಕಟ್ಟಡದ ಪಾರಂಪರಿಕ ಇತಿಹಾಸ ಹಾಗೂ ಮಹತ್ವವನ್ನು ತಿಳಿಸುವ ಮೂಲಕ ಕಟ್ಟಡದ ಆಕರ್ಷಣೆಯನ್ನು ಮತ್ತಷ್ಟು ಹೆಚ್ಚಿಸುವ ದೃಷ್ಟಿಯಿಂದ ದೆಹಲಿಯ ರಾಷ್ಟ್ರಪತಿ ಭವನ, ಸಂಸತ್‌ ಭವನಕ್ಕೆ ಏರ್ಪಡಿಸಿರುವಂತೆ ವಿಧಾನಸೌಧಕ್ಕೂ ಸಹ "Guided Tour" ಏರ್ಪಡಿ...