Bengaluru, ಏಪ್ರಿಲ್ 7 -- Kapata Nataka Soothradaari: ಸ್ಯಾಂಡಲ್‌ವುಡ್‌ನಲ್ಲಿ ಹೊಸಬರ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಇದೀಗ ಮತ್ತೊಂದು ಹೊಸಬರ ತಂಡ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ತಯಾರಾಗಿದೆ. ನವ ಪ್ರತಿಭೆಗಳು ಸೇರಿ ರೂಪಿಸಿರುವ ʻಕಪಟ ನಾಟಕ ಸೂತ್ರಧಾರಿʼ ಚಿತ್ರ ಚಿತ್ರೀಕರಣವನ್ನು ಮುಗಿಸಿಕೊಂಡು ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಧೀರಜ್ ಎಂ.ವಿ ನಿರ್ದೇಶನ ಹಾಗೂ ಅಭಿರಾಮ ಅರ್ಜುನ ಬಿಜಿನೆಸ್‌ ಹೆಡ್ ಆಗಿ ಪದಾರ್ಪಣೆ ಮಾಡುತ್ತಿರುವ ಈ ಚೊಚ್ಚಲ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಇದೀಗ ಬಿಡುಗಡೆ ಆಗಿದೆ.

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ, ನಟಿ ಸಂಗೀತಾ ಭಟ್, ನಿರ್ದೇಶಕರಾದ ಮಂಸೋರೆ, ಕೆ.ಎಂ ಚೈತನ್ಯ ಸೇರಿ ಹಲವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಪೋಸ್ಟರ್ ಮೂಲಕವೇ ಒಟ್ಟಾರೆ ಕಥನದ ಬಗ್ಗೆ ಕುತೂಹಲ ಮೂಡಿಕೊಳ್ಳುತ್ತಲೇ, ಮತ್ತೊಂದಷ್ಟು ವಿಚಾರಗಳೂ ಜಾಹೀರಾಗಿವೆ. ಹಾಗಾದರೆ ಪೋಸ್ಟರ್‌ನಲ್ಲಿ ಕಂಡಿದ್ದೇನು?...