ಭಾರತ, ಏಪ್ರಿಲ್ 21 -- ಕಳಪೆ ಬ್ಯಾಟಿಂಗ್ ನಿರ್ವಹಣೆಯಿಂದ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತವರಿನ ಮೈದಾನದಲ್ಲಿ ಮತ್ತೊಂದು ಸೋಲಿಗೆ ಶರಣಾಯಿತು. ಸರ್ವಾಂಗೀಣ ಪ್ರದರ್ಶನ ತೋರಿದ ಗುಜರಾತ್ ಟೈಟಾನ್ಸ್ ಪ್ರಸಕ್ತ ಟೂರ್ನಿಯಲ್ಲಿ 6ನೇ ಗೆಲುವು ದಾಖಲಿಸಿತು. 39 ರನ್​ಗಳಿಂದ ಜಯಿಸಿದ ಜಿಟಿ ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದರೆ, ಹೋರಾಟವೇ ತೋರದೆ ಶರಣಾದ ಕೆಕೆಆರ್​​ 5ನೇ ಸೋಲಿನೊಂದಿಗೆ 7ನೇ ಸ್ಥಾನದಲ್ಲಿದೆ. ಪ್ಲೇಆಫ್ ದೃಷ್ಟಿಯಿಂದ ಉಳಿದ 6 ಪಂದ್ಯಗಳನ್ನೂ ಗೆಲ್ಲುವುದು ಅನಿವಾರ್ಯ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್​​ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಬೀಸಿದ ಗುಜರಾತ್ ತಂಡವು ಗಿಲ್ ಮತ್ತು ಸುದರ್ಶನ್​ರ ಅರ್ಧಶತಕಗಳ ಬಲದಿಂದ 20 ಓವರ್​​ಗಳಿಗೆ 3 ವಿಕೆಟ್ ಕಳೆದುಕೊಂಡು 198 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್​, ಕಳಪೆ ಬ್ಯಾಟಿಂಗ್ ನಿರ್ವಹಣೆಯಿಂದ 20 ಓವರ್​ಗಳಿಗೆ 8 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಜಿಟಿ ಬೌಲರ್​ಗಳು ಉತ್ತಮ ಬೌಲಿಂಗ್ ಮಾಡಿದ್ದರ ಜೊತೆಗೆ ರ...