ಭಾರತ, ಏಪ್ರಿಲ್ 1 -- ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಲೀಗ್​ನಲ್ಲಿ ಉತ್ತಮ ಆರಂಭ ಪಡೆದು ಸತತ 2 ಪಂದ್ಯಗಳನ್ನು ಗೆದ್ದಿರುವ ಆರ್​​ಸಿಬಿ ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟಿದೆ. ಮತ್ತೊಂದೆಡೆ ಗುಜರಾತ್ ಸತತ 2ನೇ ದಾಖಲಿಸುವ ನಿರೀಕ್ಷೆಯಲ್ಲಿದೆ. ಪ್ರಸಕ್ತ ಆವೃತ್ತಿಯಲ್ಲಿ ಉಭಯ ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಅದಲ್ಲದೆ, ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದೆ.

1. ಆರ್​ಸಿಬಿ ಮತ್ತು ಗುಜರಾತ್ ತಂಡಗಳ ನಡುವಿನ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಏಪ್ರಿಲ್‌ 2ರ ಬುಧವಾರ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.

2. ರಜತ್ ಪಾಟೀದಾರ್ ನೇತೃತ್ವದ ಆರ್​ಸಿಬಿ, ಈಗಾಗಲೇ 2 ಗೆಲುವು ಕಂಡಿದೆ. ಕೆಕೆಆರ್ ವಿರುದ್ಧ 7 ವಿಕೆಟ್ ಗೆಲುವು, ಸಿಎಸ್​ಕೆ ಎದುರು 50 ರನ್ ಗೆಲುವು ದಾಖಲಿಸಿದೆ. ಸದ್ಯ ಬೆಂಗಳೂರು ತಂಡ ಅಂಕಪಟ್ಟಿಯ...