ಭಾರತ, ಮೇ 7 -- ಜಮ್ಮು-ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಬುಧವಾರ (ಮೇ 7) ತಡರಾತ್ರಿ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ನಡೆಸಿದೆ. ಪಾಕಿಸ್ತಾನ ಹಾಗೂ ಪಿಒಕೆಯಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಉಗ್ರರ 9 ಅಡಗುತಾಣಗಳನ್ನು ನಾಶ ಮಾಡಿದ್ದಾಗಿ ಭಾರತೀಯ ಸೇನೆ ಹೇಳಿಕೊಂಡಿದೆ. ಈ ಕಾರ್ಯಾಚರಣೆಯಲ್ಲಿ, ಜೈಶ್-ಎ-ಮೊಹಮ್ಮದ್ (ಜೆಎಂ) ಮತ್ತು ಲಷ್ಕರ್-ಎ-ತೈಬಾ (ಎಲ್ಇಟಿ) ಉಗ್ರರ ಸಂಘಟನೆಗಳ ಪ್ರಮುಖ ನೆಲೆಗಳು ನಾಶವಾಗಿವೆ. ಕೋಟ್ಲಿ, ಮುರಿಡ್ಕೆ ಹಾಗೂ ಬಹವಾಲ್ಪುರ ಮುಂತಾದ ಕಡೆಗಳಲ್ಲಿ ದಾಳಿ ನಡೆದಿದೆ.
ತಡರಾತ್ರಿ ಇದ್ದಕ್ಕಿದ್ದ ಹಾಗೆ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರತೀಯರು ವಿಡಿಯೊ, ಫೋಟೊಗಳನ್ನು ಪೋಸ್ಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸುತ್ತಿದ್ದಾರೆ. #IndiaPakistanWar, #Karachi, #WeAreNotInDanger...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.