ಭಾರತ, ಫೆಬ್ರವರಿ 19 -- ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ಪ್ರತಿಪಕ್ಷಗಳು ಹಾಗೂ ಜನಸಾಮಾನ್ಯರು ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಸರ್ಕಾರವು ಮಹತ್ವದ ನಿರ್ಧಾರವೊಂದಕ್ಕೆ ಬಂದಿದೆ. ಈ ತಿಂಗಳಿನಿಂದಲೇ ಅನ್ನಭಾಗ್ಯ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲು ಅಕ್ಕಿ ಕೊಡಲು ಕರ್ನಾಟಕ ಸರ್ಕಾರ ಮುಂದಾಗಿದೆ. ಅಗತ್ಯ ಪ್ರಮಾಣದ ಅಕ್ಕಿ ಲಭ್ಯವಿದ್ದು, ಅದರ ವಿತರಣೆಗೆ ಮುಂದಾಗಿದೆ. ಹೀಗಾಗಿ ಹಣದ ಬದಲಿಗೆ 5 ಕೆಜಿ ಅಕ್ಕಿಯನ್ನೇ ವಿತರಿಸಲಾಗುತ್ತಿದೆ.

ಇದುವರೆಗೂ ಅನ್ನಭಾಗ್ಯ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು. ಈ ತಿಂಗಳಿನಿಂದ ಇದು ಮುಂದುವರೆಯುವುದಿಲ್ಲ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ ಎಚ್‌ ಮುನಿಯಪ್ಪ ಪ್ರಕಟಣೆ ಹೊರಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಸರ್ಕಾರವು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯನ್ನು ಘೋಷಿಸಿತ್ತು. ಇದರ...