ಭಾರತ, ಫೆಬ್ರವರಿ 7 -- ಬೆಂಗಳೂರು: 1984ರಲ್ಲಿ ಭಾರತೀಯ ಸಿನಿಮಾ ರಂಗದ ದಿಗ್ಗಜರಾದ ಪುಟ್ಟಣ್ಣ ಕಣಗಾಲರು ಮತ್ತು ಹಿರಿಯ ನಿರ್ದೇಶಕರುಗಳಾದ ಲಕ್ಷ್ಮೀ ನಾರಾಯಣ್, ಸಿದ್ದಲಿಂಗಯ್ಯ ಮುಂತಾದ ಮಹನೀಯರು ಕಟ್ಟಿರುವ ಸಂಸ್ಥೆ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ (ಕಾನ್ಫಿಡ). ಇದು ಸುಮಾರು 42 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಾ ಬರುತ್ತಿದೆ. ನಿರ್ದೇಶಕರಿಗಾಗಿ ರೂಪಿತಗೊಂಡ ಈ ಸಂಘದ ಇತ್ತೀಚಿನ ಆಡಳಿತ ಮಂಡಳಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ಇಂತಹ ಸಂದರ್ಭದಲ್ಲಿ ಸಂಘದ ಅಭಿವೃದ್ಧಿ, ಯೋಜನೆಗಳನ್ನು ತಿಳಿಸಲು ಸಂಘವು ಪತ್ರಿಕಾಗೋಷ್ಠಿಯನ್ನು ಕರೆದಿತ್ತು. ಸಂಘಕ್ಕೆ ಸಂಬಂಧಪಟ್ಟಂತೆ ಸಂಘದ ಪದಾಧಿಕಾರಿಗಳು ವಿಷಯ ತಿಳಿಸಿದ ನಂತರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ಮಾತಾನಾಡಿದರು.

2009ರಲ್ಲಿ ಚಿತ್ರರಂಗದ ಎಲ್ಲಾ ಅಂಗ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಲು ಸರಕಾರ, ಕರ್ನಾಟಕ ಚಲನಚಿತ್ರ ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ. ಈ ಸಂಸ್ಥೆಯಲ್ಲಿ ನಾಮ ನಿರ್ದೇಶಿತ ಸದಸ್ಯರೊಂದಿಗೆ ಕರ್ನಾಟಕ...