ಭಾರತ, ಮೇ 2 -- ಶುಭ್ಮನ್ ಗಿಲ್ ಮತ್ತು ಜೋಸ್ ಬಟ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ಮತ್ತು ಪ್ರಸಿದ್ಧ್ ಕೃಷ್ಣ ಅವರ ಅದ್ಭುತ ಬೌಲಿಂಗ್ ಬಲದಿಂದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್​​ 38 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಜಿಟಿ ಪ್ಲೇಆಫ್ ಸನಿಹಕ್ಕೆ ಬಂದಿದ್ದು, 10 ಪಂದ್ಯಗಳಲ್ಲಿ 7 ಗೆಲುವು, 3 ಸೋಲಿನೊಂದಿಗೆ 14 ಅಂಕ ಪಡೆದು ಎರಡನೇ ಸ್ಥಾನಕ್ಕೆ ಲಗ್ಗೆ ಹಾಕಿದೆ. ಎಸ್​ಆರ್​​ಹೆಚ್ ಕೂಡ ಅಷ್ಟೇ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 7 ಸೋಲು, 3 ಗೆಲುವಿನೊಂದಿಗೆ 6 ಅಂಕ ಪಡೆದಿದೆ. ಸದ್ಯ ಪ್ಲೇಆಫ್ ಪ್ರವೇಶಿಸಲು ಸಾಸಿವೆ ಕಾಳಿನಷ್ಟು ಅವಕಾಶ ಇದ್ದರೂ ತಂಡದ​ ಕನಸು ಬಹುತೇಕ ಅಂತ್ಯಗೊಂಡಿದೆ ಎಂದರೂ ತಪ್ಪಾಗಲ್ಲ. ಕಳೆದ ವರ್ಷದ ರನ್ನರ್​ಅಪ್ ತಂಡ ಇಷ್ಟು ಹೀನಾಯ ಪ್ರದರ್ಶನ ನೀಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಅತ್ಯುತ್ತಮ ಪ್ರದರ್ಶನ ನೀಡಿತು. ಮೊದಲ ವಿಕೆಟ್​ಗೆ 41...