ಭಾರತ, ಫೆಬ್ರವರಿ 24 -- ಬೆಂಗಳೂರು: ಹನ್ನೆರಡು ವರ್ಷಗಳ ಹಳೆಯ ಪ್ರಕರಣದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕರಾಗಿದ್ದ ಮಹೇಶ್ ಜೋಶಿ ಅವರಿಗೆ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯ 1.20 ಲಕ್ಷ ರೂ. ದಂಡ ವಿಧಿಸಿದೆ. ಡಾ. ಮಹೇಶ್ ಜೋಶಿ ಅವರು ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿದ್ದಾರೆ. ದಂಡದ ಮೊತ್ತವನ್ನು ವಾರ್ಷಿಕ ಶೇ 24ರಷ್ಟು ಬಡ್ಡಿ ಸಮೇತ ದೂರುದಾರರಿಗೆ ಪರಿಹಾರವಾಗಿ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

1984ರಲ್ಲಿ ದೂರದರ್ಶನದ ನಿರ್ದೇಶಕರಾಗಿದ್ದಾಗ ಮಹೇಶ್ ಜೋಶಿ ಅವರು ಮೋಹನ್ ರಾಮ್ ಸೇರಿದಂತೆ ಏಳು ಸಹೋದ್ಯೋಗಿಗಳ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಆದರೆ ಆ ಪ್ರಕರಣ ಸುಳ್ಳು ಎಂದು 2013ರಲ್ಲಿ ಹೈಕೋರ್ಟ್ ತೀರ್ಪು ನೀಡಿ, ಪ್ರಕರಣವನ್ನು ವಜಾಗೊಳಿಸಿತ್ತು. ಹೈಕೋರ್ಟ್‌ ತೀರ್ಪಿನ ನಂತರ ಮೋಹನ್ ರಾಮ್ ಅವರು, ತಮಗಾಗಿದ್ದ ಮಾನಸಿಕ ಹಿಂಸೆ ಮತ್ತು ಆರ್ಥಿಕ ನಷ್ಟ ಸೇರಿ ರೂ.1.20 ಲಕ್ಷ ಪರಿಹಾರ ಕೋರಿ ನಗರ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರ...