ಭಾರತ, ಮೇ 15 -- ಕನ್ನಡದ ಕಿರುತೆರೆ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ ರಿಯಾಲಿಟಿ ಶೋ. 6 ವರುಷದಿಂದ 60 ವರ್ಷದ ವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಹಿಸುತ್ತಿರುವ ಈ ಸೀಸನ್ ವಿಭಿನ್ನ ಪರಿಕಲ್ಪನೆಯಿಂದ ಮತ್ತಷ್ಟು ಇಂಟೆರೆಸ್ಟಿಂಗ್ ಆಗಿ ಮೂಡಿಬರುತ್ತಿದೆ. ಅಷ್ಟೇ ಅಲ್ಲದೇ ತೀರ್ಪುಗಾರರಾದ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್, ಕಂಚಿನ ಕಂಠದ ಗಾಯಕ ವಿಜಯ ಪ್ರಕಾಶ್, ಮ್ಯಾಜಿಕಲ್ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮತ್ತು ಜನಪ್ರಿಯ ಆಂಕರ್ ಅನುಶ್ರೀ ಈ ಆವೃತ್ತಿಯ ಅತೀ ದೊಡ್ಡ ಹೈಲೈಟ್.

ಇದೀಗ ಇದೇ ರಿಯಾಲಿಟಿ ಶೋ ಫಿನಾಲೆಗೆ ಸಮೀಪಿಸುತ್ತಿದೆ. ಇನ್ನೇನು ಫಿನಾಲೆ ಹತ್ತಿರ ಬರುತ್ತಿದ್ದಂತೆ ಜನರ ಕುತೂಹಲ ಹೆಚ್ಚಾಗುವುದರ ಜೊತೆಗೆ ಸ್ಪರ್ಧೆಯೂ ಮತ್ತಷ್ಟು ಕಠಿಣವಾಗುತ್ತಿದೆ. ಈ ವಾರ (ಮೇ 17 ಮತ್ತು 18) ನಡೆಯಲಿರುವ 'ಟಿಕೆಟ್ ಟು ಫಿನಾಲೆ'ಯಲ್ಲಿ ಒಟ್ಟು 13 ಸ್ಪರ್ಧಿಗಳು ಕಣದಲ್ಲಿದ್ದಾರೆ.

ಇದನ್ನೂ ಓದಿ: ʻಯಾರ ಮನೆಯಲ್ಲೂ ಇಂಥ ಕೆಟ್ಟ ಹೆಣ್ಣು ಹುಟ್ಟಬಾರದು!ʼ ಚೈತ್ರಾ ಕು...