Bangalore, ಫೆಬ್ರವರಿ 27 -- ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಂದು ತಿಂಗಳಷ್ಟೇ ಬಾಕಿ ಉಳಿದಿದೆ. ಮಕ್ಕಳು ಅಂತಿಮ ಹಂತದ ಸಿದ್ದತೆಯಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿಗಳ ಮುಂದಿನ ದಿನಗಳಲ್ಲಿ ಮನಸಿಟ್ಟು ಓದಿದರೂ, ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಿದೆ. ಪರೀಕ್ಷೆಗೆ ಹೇಗೆ ಸಿದ್ಧತೆ ನಡೆಸಬೇಕು ಎಂಬುದನ್ನು ಕಳೆದ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಸಲಹೆ ನೀಡಿದ್ದಾರೆ. ಅವರ ಓದಿನ ಕ್ರಮ, ಸಿದ್ದತೆಯ ಸಲಹೆಯನ್ನು ನೀವು ಕೂಡಾ ಅನುಸರಿಸಬಹುದು.‌ ಬಾಗಲಕೋಟೆ ಜಿಲ್ಲೆ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅಂಕಿತಾ ಕೊನ್ನೂರ್‌, ಕಳೆದ ಬಾರಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದರು.

ಐಎಎಸ್‌ ಅಧಿಕಾರಿಯಾಗುವ ಕನಸು ಹೊತ್ತಿದ್ದ ಅಂಕಿತಾ, ಪರೀಕ್ಷೆಯಲ್ಲಿ ಯಶಸ್ಸು ಕಾಣಲು ತಾವು ಅನುಸರಿಸಿದ ತಂತ್ರವನ್ನು ಹೇಳಿಕೊಂಡಿದ್ದಾರೆ. ಐಎಎಸ್‌ ಅಧಿಕಾರಿ ಆಗಬೇಕೆಂಬ ಕನಸಿನೊಂದಿಗೆ ಹಾಸ್ಟೆಲ್‌ನಲ್ಲಿ ಓದಿದ ಅಂಕಿ...