ಭಾರತ, ಮೇ 29 -- ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳ ಕನಸು ನನಸಾಗುವ ಸನಿಹಕ್ಕೆ ಬಂದಿದೆ. 18ನೇ ಆವೃತ್ತಿಯ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ _ ವಿಕೆಟ್​​ಗಳ ಗೆಲುವು ಸಾಧಿಸಿದ ರಜತ್ ಪಾಟೀದಾರ್ ನೇತೃತ್ವದ ಆರ್​ಸಿಬಿ, 2016ರ ನಂತರ ಇದೇ ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿದೆ. ಜೂನ್ 3ರಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಫೈನಲ್​ನಲ್ಲಿ ಕಣಕ್ಕಿಳಿಯಲಿದೆ.

ಐಪಿಎಲ್​ನಲ್ಲಿ ಒಟ್ಟಾರೆ 4ನೇ ಬಾರಿಗೆ ಫೈನಲ್ (2009, 2011, 2016, 2025) ಪ್ರವೇಶಿಸಿರುವ ಬೆಂಗಳೂರು ಚೊಚ್ಚಲ ಪ್ರಶಸ್ತಿ ಗೆಲ್ಲುವ ಕನಸಿನಲ್ಲಿದೆ. ರಜತ್ ಪಾಟೀದಾರ್ ನಾಯಕತ್ವ ವಹಿಸಿಕೊಂಡ ತನ್ನ ಚೊಚ್ಚಲ ಐಪಿಎಲ್​ ಲೀಗ್​ನಲ್ಲೇ ಆರ್​ಸಿಬಿ ತಂಡವನ್ನು ಫೈನಲ್​ಗೇರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. 18 ವರ್ಷಗಳ ಟ್ರೋಫಿ ಬರ ನೀಗಿಸಲು ಇದೊಳ್ಳೆ ಸುವರ್ಣಾವಕಾಶವೂ ಹೌದು. ಪ್ರತಿ ಸಲ ಈ ಸಲ ಕಪ್ ನಮ್ದೆ ಎನ್ನುತ್ತಿರುವ ಆರ್​ಸಿಬಿ ಅಭಿಮಾನಿಗಳಿಗೆ ಟ್...