ಭಾರತ, ಫೆಬ್ರವರಿ 13 -- ಬೆಂಗಳೂರು: ರಾಜ್ಯ ಸರ್ಕಾರವು 2024-25ನೇ ಸಾಲಿನ 4 ರಾಷ್ಟ್ರೀಯ ಹಾಗೂ 15 ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್‌ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಒಟ್ಟು 19 ಪ್ರಶಸ್ತಿಗಳನ್ನು ಇಂದು (ಫೆ.13, ಗುರುವಾರ) ಘೋಷಿಸಲಾಗಿದೆ. ಆಯ್ಕೆ ಸಮಿತಿಯು ನಾಲ್ವರು ಸಾಧಕರನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಡಾ.ಎಸ್.ಆರ್.ಗುಂಜಾಳ ಅವರನ್ನು ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟ್ರಸ್ಟ್‌ಗೆ ಶ್ರೀ ಭಗವಾನ್‌ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ ಘೋಷಣೆಯಾಗಿದೆ. ಇದೇ ವೇಳೆ ಬಸಪ್ಪ ಎಚ್. ಭಜಂತ್ರಿಯವರನ್ನು ಟಿ. ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ ಹಾಗೂ ಮುಂಬೈಯ ಬೇಗಂ ಪರ್ವಿನ್‌ ಸುಲ್ತಾನಾ ಅವರನ್ನು ಗಾನಯೋಗಿ ಪಂಡಿತ್‌ ಪಂಚಾಕ್ಷರಿ ಗವಾಯಿ ರಾಷ್ಟ್...