ಭಾರತ, ಮೇ 11 -- ಬೆಂಗಳೂರು: ವಿವಿಧ ಸರ್ಕಾರಿ ಶಿಕ್ಷಣ ಸಂಸ್ಥೆಗಳ 2025-26ನೇ ಸಾಲಿನ ಶೈಕ್ಷಣಿಕ ಅವಧಿಯ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿಹೆಚ್‌ಟಿಟಿ) ಕೋರ್ಸ್ ಕಲಿಕೆಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 39 ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 2,500 ರೂಪಾಯಿಯಂತೆ ಶಿಷ್ಯವೇತನ ಸಿಗಲಿದೆ. ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುತ್ತದೆ ಎಂದು ವಾರ್ತಾ ಪ್ರಸಾರ ಇಲಾಖೆ ಪ್ರಕಟಣೆ ತಿಳಿಸಿದೆ.
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸುವವರು, ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷೆಯನ್ನು ಒಂದು ವಿಷಯವಾಗಿ ಓದಿರಬೇಕು. 2025ರ ಜುಲೈ 1ಕ್ಕೆ ಸಾಮಾನ್ಯವರ್ಗದ ಅಭ್ಯರ್ಥಿಗಳಾದರೆ 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.