ಭಾರತ, ಮೇ 10 -- ಕನ್ನಡದ ಸಿನಿಮಾವೊಂದು ಚಿತ್ರಮಂದಿರಗಳಲ್ಲಿ ತೆರೆಕಂಡು ಸುದೀರ್ಘ 21 ತಿಂಗಳ ಬಳಿಕ ಒಟಿಟಿಗೆ ಆಗಮಿಸಿದೆ. ಪೊಲಿಟಿಕಲ್ ಥ್ರಿಲ್ಲರ್ ಜಾನರ್ನ ಉತ್ತರ ಕರ್ನಾಟಕದ ಜವಾರಿ ಭಾಷೆಯ ಘಮ ಹೊತ್ತ ʻಬಯಲುಸೀಮೆʼ ಸಿನಿಮಾ ಇದೀಗ ಡಿಜಿಟಲ್ ಸ್ಟ್ರೀಮಿಂಗ್ಗೆ ಬಂದಿದೆ. ವರುಣ್ ಕಟ್ಟಿಮನಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಹೆಸರೇ ಸೂಚಿಸುವಂತೆ, ಇದೊಂದು ಪಕ್ಕಾ ಉತ್ತರ ಕರ್ನಾಟಕ ಸೊಗಡಿರುವ ಚಿತ್ರ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಸಬ್ಜೆಕ್ಟ್ ಈ ಚಿತ್ರದ ಕಥಾವಸ್ತು. ಎಂಬತ್ತರ ದಶಕ ಹಾಗೂ ಈಗಿನ ಕಾಲಘಟ್ಟದಲ್ಲಿಯೂ ಈ ಕಥೆ ತೆರೆದುಕೊಳ್ಳಲಿದೆ.
ಇದೀಗ ಇದೇ ಸಿನಿಮಾ ಸುದೀರ್ಘ ದಿನಗಳ ಬಳಿಕ ಒಟಿಟಿಗೆ ಆಗಮಿಸಿದೆ. ನಿರ್ದೇಶನದ ಜತೆಗೆ ನಾಯಕನಾಗಿಯೂ ವರುಣ್ ಕಟ್ಟಿಮನಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಸಂಯುಕ್ತ ಹೊರನಾಡು ನಾಯಕಿಯಾಗಿ ನಟಿಸಿದರೆ, ರವಿಶಂಕರ್, ಟಿ.ಎಸ್ ನಾಗಾಭರಣ, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.