ಭಾರತ, ಏಪ್ರಿಲ್ 2 -- ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು (Karnataka 2nd PUC results 2025) ಯಾವುದೇ ಸಮಯದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ (KSEAB) ಪ್ರಕಾರ, ಈ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇಲ್ಲ. ಸದ್ಯ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಮೌಲ್ಯಮಾಪನ ಮುಗಿದ ಬೆನ್ನಲ್ಲೇ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1ರಂದು ಪ್ರಾರಂಭವಾಗಿ ಮಾರ್ಚ್ 20ವರೆಗೆ ನಡೆದಿತ್ತು. ಎಲ್ಲಾ ಪರೀಕ್ಷಾ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಪರೀಕ್ಷೆಗಳು ನಡೆದಿದ್ದವು.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯ ನಿಖರ ದಿನಾಂಕ ಇನ್ನೂ ಅಂತಿಮವಾಗಿಲ್ಲ. ಪ್ರಸ್ತುತ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿರುವ ಕಾರಣದಿಂದಾಗಿ, ರಿಸಲ್ಟ್‌ ಬರುವುದು ತಡವಾಗಬಹುದು. ಕಳೆದ ವರ್ಷ ಏಪ್ರಿಲ್ 10ರಂದು ಫಲಿತಾಂಶ ಘೋಷಿಸಲಾಗಿತ್ತು. ಈ ವರ್ಷವೂ ಇದೇ ರೀ...