ಭಾರತ, ಮಾರ್ಚ್ 23 -- Karnataka PUC 2 Results 2025: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟಗಳಲ್ಲಿ ಒಂದು. ಈಗಾಗಲೇ ಪಿಯುಸಿ ಪರೀಕ್ಷೆಗಳು ಮುಗಿದಿದ್ದು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಏಪ್ರಿಲ್ ತಿಂಗಳಿನಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದ್ದು, ದಿನಾಂಕ, ಸಮಯದ ಬಗ್ಗೆ ಇನ್ನೂ ನಿಖರವಾದ ಮಾಹಿತಿ ಲಭ್ಯವಿಲ್ಲ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ (ದ್ವಿತೀಯ ಪಿಯುಸಿ ಪರೀಕ್ಷೆ 1) ತಾತ್ಕಾಲಿಕ ಉತ್ತರ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದು ಇನ್ನು ಕೆಲವು ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು karresults.nic.in ವೆಬ್ಸೈಟ್ನಲ್ಲಿ ದ್ವಿತೀಯ ಪಿಯುಸಿ ರಿಸ್ಟಲ್ ನೋಡಬಹುದಾಗಿದೆ. ಫಲಿತಾಂಶ ಪ್ರಕಟವಾಗುವ ಮೊದಲು ನಿಖರ ದಿನಾಂಕ ಹಾಗೂ ಸಮಯ ತಿಳಿಯಲು ವಿದ್ಯಾರ್ಥಿಗಳು ನಿಯಮಿತವಾಗಿ ಕೆಎಸ್ಇಎಬ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.