ಭಾರತ, ಏಪ್ರಿಲ್ 8 -- ಕರ್ನಾಟಕ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6.47 ಲಕ್ಷ ವಿದ್ಯಾರ್ಥಿಗಳ ಪೈಕಿ 4.68 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡ ಶೇ 73.45 ರಷ್ಟು ಫಲಿತಾಂಶ ದಾಖಲಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಇದು ಕಳೆದ ಬಾರಿಗೆ ಹೋಲಿಸಿದರೆ ಶೇ 8ರಷ್ಟು ಕಡಿಮೆಯಾಗಿದೆ. ದಕ್ಷಿಣ ಕನ್ನಡದ ಮಂಗಳೂರು ಕೆನರಾ ಕಾಲೇಜಿನ ದೀಪಶ್ರೀ ವಾಣಿಜ್ಯ ವಿಭಾಗದಲ್ಲಿ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ 600ಕ್ಕೆ ‌597 ಅಂಕ ಗಳಿಸಿರುವ ಸಂಜನಾ ಬಾಯಿ ಮೊದಲ ರ್ಯಾಂಕ್ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್‌, ದೀಕ್ಷಾ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಸಹ 599 ಅಂಕ ಗಳಿಸಿದ್ದಾರೆ. 2024ರಲ್ಲಿ ಶೇ 81.15 ಫಲಿತಾಂಶ ಬಂದಿತ್ತು. ಜಿಲ್ಲಾವಾರು ಫಲಿತಾಂಶ ನೋಡುವುದಾದರೆ ಈ ಬಾರಿ ಉಡುಪಿ ಜಿಲ್ಲೆ ಶೇ 93.90ರಷ್ಟು ಫಲಿತಾಂಶ ದಾಖಲಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.

ಕಲಾ ವಿಭಾಗದಲ್ಲಿ ಪ್ರಥಮ ಸ...