Bangalore, ಏಪ್ರಿಲ್ 7 -- 2nd Puc Results 2025: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಕುತೂಹಲ ವಿದ್ಯಾರ್ಥಿಗಳು, ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಗಳಲ್ಲಿ ಹೆಚ್ಚಿದೆ. ಈಗಾಗಲೇ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದು ಮೂರು ವಾರವೇ ಕಳೆದಿವೆ. ಅಲ್ಲದೇ ಉತ್ತರ ಪತ್ರಿಕೆಗಳ ಮೌಲ್ಯಮಾಪನವೂ ಮುಗಿದು ನಾಲ್ಕು ದಿನವೇ ಆಗಿದೆ. ಬಹುತೇಕ ಎಲ್ಲಾ ವಿಷಯಗಳ ಅಂಕಗಳ ಲೆಕ್ಕಾಚಾರ, ಫಲಿತಾಂಶವನ್ನು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿ ಸಿದ್ದಪಡಿಸಿಕೊಂಡಿದೆ. ಪ್ರಕಟಣೆ ದಿನಾಂಕವನ್ನು ಮಾತ್ರ ಘೋಷಿಸಬೇಕಿದೆ. ಒಂದೆರಡು ದಿನದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕ ಪ್ರಕಟಿಸುವ ನಿರೀಕ್ಷೆಯಿದೆ. ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿ ಉನ್ನತ ಮೂಲಗಳ ಪ್ರಕಾರ ಏಪ್ರಿಲ್‌ 10 ರಂದೇ ಫಲಿತಾಂಶ ಪ್ರಕಟವಾಗಬಹುದು, ಇಲ್ಲವೇ ಒಂದು ದಿನ ಆಚೀಚೆ ಆಗಬಹುದು ಎನ್ನಲಾಗುತ್ತಿದೆ.

ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಯೊಬ್ಬರ ಪ್ರಕಾರ, ಬಹ...