ಭಾರತ, ಮಾರ್ಚ್ 2 -- 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯುತ್ತಿದ್ದಂತೆ ಟೀಮ್ ಇಂಡಿಯಾ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಇದು ಅವರಿಗೆ 300ನೇ ಏಕದಿನ ಪಂದ್ಯವಾಗಿದ್ದು, ಭಾರತದ ದಿಗ್ಗಜರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. 300 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳಲ್ಲಿ ಕಣಕ್ಕಿಳಿದ ದಾಖಲೆ ಪಟ್ಟಿಯಲ್ಲಿ ಭಾರತದ ಪರ 7ನೇ ಹಾಗೂ ವಿಶ್ವದ 22ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕೊಹ್ಲಿ.

ಪಾಕಿಸ್ತಾನ ವಿರುದ್ಧದ 51ನೇ ಶತಕ ಸಿಡಿಸಿ ಇತಿಹಾಸ ನಿರ್ಮಿಸಿರುವ ಕೊಹ್ಲಿ, ಏಕದಿನ ಕ್ರಿಕೆಟ್​ನಲ್ಲಿ ವೇಗವಾಗಿ 14,000 ರನ್‌ ಕಲೆ ಹಾಕಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಫಲ್ಯಗಳಿಂದ ಟೀಕೆಗೆ ಗುರಿಯಾಗಿದ್ದ ವಿರಾಟ್ ಮತ್ತೆ ಫಾರ್ಮ್​ಗೆ ಮರಳಿದ್ದು, ಫ್ಯಾನ್ಸ್​ಗೆ ಖುಷಿ ನೀಡಿದೆ. ಶತಕ ಸಿಡಿಸಿ ಹಲವು ದಾಖಲೆಗಳನ್ನು ಹೆಸರಿಗೆ ಬರೆದುಕೊಂಡಿದ್ದಾರೆ.

ಭಾರತದ ಪರ ಏಕದಿನ ಕ್ರಿಕೆಟ್​​ನಲ್ಲಿ 300 ಪಂದ್ಯ...