ಭಾರತ, ಮೇ 7 -- ಜೂನ್ 20ರಿಂದ ಶುರುವಾಗುವ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಪ್ರವಾಸ ಕೈಗೊಳ್ಳುವುದಕ್ಕೂ ಮುನ್ನವೇ 38 ವರ್ಷದ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ನಿವೃತ್ತಿ ಕುರಿತು ಪ್ರಕಟಿಸಿದ್ದಾರೆ. ನಿವೃತ್ತಿ ಘೋಷಿಸಿದ್ದರೂ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಏಕದಿನ ಕ್ರಿಕೆಟ್ನಲ್ಲಿ ಮುಂದುವರೆಯುವುದಾಗಿ ಪ್ರಕಟಿಸಿದ್ದಾರೆ.
'ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಹಂಚಿಕೊಳ್ಳಲು ಬಯಸುತ್ತೇನೆ. ನನ್ನ ದೇಶವನ್ನು ಬಿಳಿ ಜೆರ್ಸಿಯಲ್ಲಿ ಪ್ರತಿನಿಧಿಸುವುದು ಸಂಪೂರ್ಣ ಗೌರವವಾಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಏಕದಿನ ಮಾದರಿಯಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ' ಎಂದು ಇನ್ಸ್ಟಾಗ್ರಾಮ್ನಲ್ಲಿ ತಿಳಿಸಿದ್ದಾರೆ.
2013ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ರೋಹಿತ್ ತನ್ನ ಮೊದಲ ಎರಡೂ ಪಂದ್ಯಗಳಲ್ಲಿ ಶ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.