ಭಾರತ, ಮಾರ್ಚ್ 29 -- ಎಂ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ಜರುಗಿದ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 50 ರನ್​ಗಳ ಭರ್ಜರಿ ಗೆಲುವು ದಾಖಲಿಸಿತು. ಇದರೊಂದಿಗೆ ಚೆಪಾಕ್​​ನಲ್ಲಿ 17 ವರ್ಷಗಳ ನಂತರ ಗೆಲುವಿನ ನಗೆ ಬೀರಿದೆ. 6155 ದಿನಗಳ ಬಳಿಕ ಚೆನ್ನೈನಲ್ಲಿ ಗೆದ್ದಿರುವ ಆರ್​ಸಿಬಿ, ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಭದ್ರಪಡಿಸಿಕೊಂಡಿದೆ. ಆದರೆ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಎಂಎಸ್ ಧೋನಿ ಕಣಕ್ಕಿಳಿದಿದ್ದು ಸಿಕ್ಕಾಪಟ್ಟೆ ಚರ್ಚೆಗೆ ಗುರಿಯಾಗಿದೆ. ಅದರಲ್ಲೂ ಸಿಎಸ್​ಕೆ ಪರ ಆಡಿದ್ದ ಮಾಜಿ ಕ್ರಿಕೆಟರ್​​ಗಳೇ ಧೋನಿ ನಡೆಗೆ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ಟಾಸ್ ಗೆದ್ದ ಋತುರಾಜ್ ಗಾಯಕ್ವಾಡ್ ನೇತೃತ್ವದ ಸೂಪರ್ ಕಿಂಗ್ಸ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ನಡೆಸಿದ ಬೆಂಗಳೂರು ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ರಜತ್ ಪಾಟೀದಾರ್ ಅಬ್ಬರದ ಅರ್ಧಶತಕ ಸಿಡಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಮತ್ತೊ...