Bangalore, ಏಪ್ರಿಲ್ 12 -- Agni veer Recruitment 2025:ಭಾರತೀಯ ಸೇನೆಯು ಅಗ್ನಿವೀರ್‌ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಿದೆ. ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಕಳೆದ ತಿಂಗಳೇ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಆರಂಭಿಸಿತ್ತು. ಈಗಾಗಲೇ ಅರ್ಜಿ ಸ್ವೀಕಾರ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ನೋಂದಣಿ ದಿನಾಂಕವನ್ನು ಏಪ್ರಿಲ್ 25ಕ್ಕೆ ವಿಸ್ತರಿಸಲಾಗಿದೆ. ಈ ವರ್ಷದಿಂದ ಹೊಸದಾಗಿ ಕೆಲವು ಪರೀಕ್ಷೆಯನ್ನು ಪರಿಚಯಿಸಲಾಗಿದೆ. ಅಗ್ನಿವೀರ್ ಜನರಲ್ ಡ್ಯೂಟಿ, ತಾಂತ್ರಿಕ, ಕ್ಲರ್ಕ್/ಸ್ಟೋರ್ ಕೀಪರ್ ಮತ್ತು ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸಿಇಇ ಪರೀಕ್ಷೆ 13 ಭಾಷೆಗಳಲಲ್ಲಿ ಎದುರಿಸಲು ಅವಕಾಶ ಮಾಡಲಾಗಿದೆ.

ಸೇನೆಯಲ್ಲಿ ಅಗ್ನಿವೀರರು ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು/ಇತರೆ ಶ್ರೇಣಿಗಳ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ನೋಂದಣಿ ದಿನಾಂಕವನ್ನು ಏಪ್ರಿಲ್...