Delhi, ಮಾರ್ಚ್ 13 -- Agniveer Recruitment 2025: ಭಾರತೀಯ ಸೇನೆಗೆ ಸೇರಿ ಬದುಕು ಕಟ್ಟಿಕೊಳ್ಳಬೇಕು ಎನ್ನುವ ಕನಸು ಕಾಣುವ ಯುವಕರಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು 2025ರ ನೇಮಕಾತಿ ಪ್ರಕ್ರಿಯೆಯೂ ಶುರುವಾಗಿದೆ. ಅಗ್ನಿವೀರ್‌ ಹುದ್ದೆಗಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮಾರ್ಚ್ 12 ರಿಂದ ಪ್ರಾರಂಭಗೊಂಡಿವೆ. ಈ ಹುದ್ದೆ ಸೇರಬಯಸುವ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 10 ರವರೆಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯಡಿಯಲ್ಲಿ, ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್, ಅಗ್ನಿವೀರ್ ಟ್ರೇಡ್ಸ್‌ಮನ್, ಸೈನಿಕ್ ಟೆಕ್ನಿಕಲ್ ನರ್ಸಿಂಗ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನೇಮಕಾತಿ ನಡೆಯಲಿದೆ. ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಜೂನ್​​ನಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ ಭೇಟಿ ನೀಡಿ.

ಅಗ್ನಿವೀರ್ ಜನರಲ್ ಡ್ಯೂಟಿ (ಜಿಡಿ) ಹುದ್ದೆಗಳಿಗೆ ಅಭ್ಯರ್...