Bengaluru, ಏಪ್ರಿಲ್ 3 -- Agnyathavasi Trailer: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಮರ್ಡರ್ ಮಿಸ್ಟರಿ ಸಿನಿಮಾಗಳು ಬಂದಿವೆ. ಈಗ ಬಿಡುಗಡೆಗೆ ಸಜ್ಜಾಗಿರುವ ಅಜ್ಞಾತವಾಸಿ ಸಿನಿಮಾ ಕೂಡ ಮರ್ಡರ್ ಮಿಸ್ಟರಿ ಕಥಾಹಂದರದ ಸಿನಿಮಾ. ಇದೀಗ ಇದೇ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದ್ದು, ಟ್ರೇಲರ್‌ನಲ್ಲಿ ರೋಚಕತೆಯನ್ನು ಉಕ್ಕಿಸಿದ್ದಾರೆ ಗುಲ್ಟು ಸಿನಿಮಾ ಖ್ಯಾತಿಯ ನಿರ್ದೇಶಕ ಜನಾರ್ದನ್‌ ಚಿಕ್ಕಣ್ಣ. ಮಲನಾಡ ಭಾಗದಲ್ಲಿನ ಕೊಲೆ ಹಿನ್ನೆಲೆಯ ಕಥೆಯೊಂದಿಗೆ ನಿರ್ದೇಶಕರು ಆಗಮಿಸಿದ್ದಾರೆ. ಥ್ರಿಲ್ಲಿಂಗ್‌ ಎಲಿಮೆಂಟ್‌ಗಳನ್ನೇ ಆಧಾರವಾಗಿಟ್ಟುಕೊಂಡು, ಮೂಡಿಬಂದ ಕೌತುಕಭರಿತ ಈ ಸಿನಿಮಾ ಏಪ್ರಿಲ್‌ 18ರಂದು ತೆರೆಗೆ ಬರಲಿದೆ.

2 ನಿಮಿಷ 6 ಸೆಕೆಂಡ್ ಇರುವ ಅಜ್ಞಾತವಾಸಿ ಟ್ರೇಲರ್ ಸಾಕಷ್ಟು ಕುತೂಹಲ ಹೆಚ್ಚಿಸಿದೆ. ಮಲೆನಾಡಿ ಸೊಬಗಿನಲ್ಲಿ ನಡೆಯುವ ರೋಚಕ ಮರ್ಡರ್ ಮಿಸ್ಟರಿ ಕಥೆ ರಣರೋಚಕವಾಗಿ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಕಟ್ಟಿಕೊಟ್ಟಿದ್ದಾರೆ. ಇನ್ನೂ ಎಂದಿನಂತೆ ರಂಗಾಯಣ ರಘು ತಮ್ಮ ಪಾತ್ರದಲ್ಲಿ ಜೀವಿಸಿದ್ದಾರೆ. ಪಾವನಾ ಗೌಡ, ಸಿದ್ದು ಮೂಲಿಮನ...