Vijayapura, ಮಾರ್ಚ್ 11 -- Almatti Reservoir: ಉತ್ತರ ಕರ್ನಾಟಕದ ಅತೀ ದೊಡ್ಡ ಜಲಾಶಯಗಳಲ್ಲಿ ಒಂದಾದ ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್‌ ಬಹದ್ದೂರು ಶಾಸ್ತ್ರೀ ಜಲಾಶಯದಲ್ಲಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಉತ್ತರ ಕರ್ನಾಟಕದ ಬೆಳಗಾರರ ಹೆಸರಿನಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಸತತ 20 ದಿನ ಸುಮಾರು 32 ಟಿಎಂಸಿ ನೀರು ಹರಿಸಿದ ಪರಿಣಾಮವಾಗಿ ಆಲಮಟ್ಟಿ ಜಲಾಶಯದ ನೀರಿನ ಮಟ್ಟವು ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದೆ. ಇದರಿಂದ ಇನ್ನೂ ಬೇಸಿಗೆ ಎರಡೂವರೆ ತಿಂಗಳು ಇರುವಾಗಲೇ ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾಗಿರುವುದರಿಂದ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾ ಎನ್ನುವ ಚರ್ಚೆಗಳು ನಡೆದಿವೆ. ಆದರೆ ಅಧಿಕಾರಿಗಳು ಮಾತ್ರ ನಿರ್ವಹಣೆ ಕಾರಣದಿಂದ ನೀರಿನ ಸಮಸ್ಯೆ ಆಗೋದಿಲ್ಲ ಎನ್ನುವ ಉತ್ತರ ನೀಡುತ್ತಾರೆ. ಆದರೂ ಬೇಸಿಗೆ ವೇಳೆ ಹೆಚ್ಚಿನ ನೀರನ್ನು ಹರಿಸಿರುವುದು ರೈತರ ಆಕ್ರೋಶಕ್ಕೂ ಕಾರಣ ಮಾಡಿಕೊಟ್ಟಿದೆ.

ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ ಗರಿಷ್ಠ 123.08 ಟಿಎಂಸಿ ನ...